



ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ. ಎಲಿಜಬೆತ್ ಅವರು ತನ್ನ ಪ್ರಾಥಮಿಕ ಶಿಕ್ಷಣವನ್ನು ತಮಿಳುನಾಡಿನಲ್ಲಿ ಪಡೆದು ನಂತರದ ಶಿಕ್ಷಣವನ್ನು ಗೋರಕ್‌ಪುರದಲ್ಲಿ ಪಡೆದಿದ್ದಾರೆ. ಇವರು ಭಾಷಣಕಲೆಯಲ್ಲಿ ಮತ್ತು ಬರವಣಿಗೆಯಲ್ಲಿ ನೈಪುಣ್ಯತೆಯನ್ನು ಪಡೆದಿದ್ದು,ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಎಲಿಜಬೇತ್ ಅವರು ಮದ್ರಾಸ್ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಮತ್ತು ಪೂಕೋಡ್‌ನ ವೆಟರ್ನರಿ ಕಾಲೇಜಿನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.